ಮಕ್ಕಳಿಗೂ ಹೆಲ್ಮೆಟ್ ಲಭ್ಯ – ಸರಕಾರಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು: ಮಕ್ಕಳಿಗೂ ಸುರಕ್ಷತಾ ಹೆಲ್ಮೆಟ್ ದೊರೆಯುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸೂಚಿಸ ಬೇಕೆಂದು ಕೋರಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ರಾಜ್ಯ ಉಚ್ಛ ನ್ಯಾಯಾಲಯವು ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಡಾ. ಕೆ. ಅರ್ಚನಾ ಭಟ್ ಎಂಬುವರು ಸಲ್ಲಿಸಿರುವ ಅರ್ಜಿ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ. ಬಿ. ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ವಿಭಾಗೀಯ ಪೀಠವು ಈ ಆದೇಶ ನೀಡಿದೆ.
ಒಂಬತ್ತು ತಿಂಗಳು ಮೇಲ್ಪಟ್ಟ ಎಲ್ಲ ಮಕ್ಕಳಿಗೆ ಸುರಕ್ಷತಾ ಹೆಲ್ಮೆಟ್ ಹಾಗೂ ಸುರಕ್ಷತಾ ಸಾಧನಗಳು ದೊರೆಯಬೇಕು. ರಾಜ್ಯದಲ್ಲಿ ಮಕ್ಕಳಿಗೆ ಅಗತ್ಯ ಹೆಲ್ಮೆಟ್ ಸಿಗುತ್ತಿಲ್ಲ. ಈ ಕುರಿತು ನಿರ್ದೇಶನ ನೀಡಬೇಕು ಎಂದು ಈ ಅರ್ಜಿಯಲ್ಲಿ ಕೋರಲಾಗಿದೆ.
ಹೈಕೋರ್ಟ್ ಆರು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ಸೂಚಿಸಿ ವಿಚಾರಣೆಯನ್ನು ಜನವರಿಗೆ ಮುಂದೂಡಿದೆ.
ವರದಿ : ಲಾಗೈಡ್ ಮೈಸೂರು