23/12/2024

Law Guide Kannada

Online Guide

ಮದರಸಾ ಕಾಯ್ದೆ ಕಾನೂನು ಬದ್ಧ

ಮಹತ್ವದ ತೀರ್ಪು ಪ್ರಕಟಿಸಿದ ಸುಪ್ರೀಂ ಕೋರ್ಟ್ ನವದೆಹಲಿ: ಮದರಸಾ ಕಾಯ್ದೆ ಜಾತ್ಯತೀತ ತತ್ವವನ್ನು ಉಲ್ಲಂಘಿಸುತ್ತದೆ ಎಂದು ಈ ಹಿಂದೆ ಅಲಹಾಬಾದ್ ಹೈಕೋರ್ಟ್‌ ನೀಡಿದ ತೀರ್ಪನ್ನು ರದ್ದುಪಡಿಸಿದ ಸುಪ್ರೀಂ ಕೋರ್ಟ್, ಮದರಸಾ ಕಾಯ್ದೆಯು ಕಾನೂನುಬದ್ಧವಾಗಿದ್ದು, ಜಾತ್ಯತೀತ ತತ್ವವನ್ನು ಉಲ್ಲಂಘಿಸುವುದಿಲ್ಲ ಎಂದು ಮಹತ್ವದ ತೀರ್ಪು ನೀಡಿದೆ. ಈ ಮೂಲಕ ಉತ್ತರ ಪ್ರದೇಶದ ಮದರಸಾ ಶಿಕ್ಷಣ ಮಂಡಳಿ ಕಾಯ್ದೆ- 2004ರ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿಹಿಡಿದಿದೆ. ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದೀವಾಲಾ ಮತ್ತು ಮನೋಜ್ ಮಿಶ್ರಾ ಅವರಿದ್ದ ತ್ರಿ ಸದಸ್ಯ ನ್ಯಾಯಪೀಠ ಈ ತೀರ್ಪು ನೀಡಿದೆ. ಅಲಹಾಬಾದ್ ಹೈಕೋರ್ಟ್‌ ನೀಡಿದ ತೀರ್ಪು ದೋಷಪೂರಿತವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್ ನ್ಯಾಯಪೀಠವು ಮದರಸಾ ಕಾಯ್ದೆ ಕಾನೂನು ಬದ್ದ ನ್ಯಾಯಸಮ್ಮತವಾಗಿದೆ. ಜಾತ್ಯತೀತ ತತ್ವದ ಆಧಾರದ ಮೇಲೆ ಕಾಯ್ದೆಯೊಂದನ್ನು ರದ್ದುಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿತು. ಇದೇ ವೇಳೆ, ಕಾಯ್ದೆಯೊಂದನ್ನು ಶಾಸನಬದ್ಧವಾಗಿ ರೂಪಿಸಿರದೇ ಇದ್ದಲ್ಲಿ ಸಂವಿಧಾನದ ಇತರ ಅವಕಾಶಗಳನ್ನು ಉಲ್ಲಂಘಿಸುತ್ತಿದ್ದರೆ, ಅಂತಹ ಕಾಯ್ದೆಯನ್ನು ಮಾತ್ರ ಕಾನೂನುಬಾಹಿರ ಎಂದು ಘೋಷಿಸಬಹುದು ಎಂದು ನ್ಯಾಯಪೀಠ ತಿಳಿಸಿದೆ.

ಈ ಮೂಲಕ ಉತ್ತರ ಪ್ರದೇಶದ ಮದರಸಾ ಶಿಕ್ಷಣ ಮಂಡಳಿ ಕಾಯ್ದೆ- 2004ರ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿಹಿಡಿದಿದೆ.
ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದೀವಾಲಾ ಮತ್ತು ಮನೋಜ್ ಮಿಶ್ರಾ ಅವರಿದ್ದ ತ್ರಿ ಸದಸ್ಯ ನ್ಯಾಯಪೀಠ ಈ ತೀರ್ಪು ನೀಡಿದೆ.

ಅಲಹಾಬಾದ್ ಹೈಕೋರ್ಟ್‌ ನೀಡಿದ ತೀರ್ಪು ದೋಷಪೂರಿತವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್ ನ್ಯಾಯಪೀಠವು ಮದರಸಾ ಕಾಯ್ದೆ ಕಾನೂನು ಬದ್ದ ನ್ಯಾಯಸಮ್ಮತವಾಗಿದೆ. ಜಾತ್ಯತೀತ ತತ್ವದ ಆಧಾರದ ಮೇಲೆ ಕಾಯ್ದೆಯೊಂದನ್ನು ರದ್ದುಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿತು.

ಇದೇ ವೇಳೆ, ಕಾಯ್ದೆಯೊಂದನ್ನು ಶಾಸನಬದ್ಧವಾಗಿ ರೂಪಿಸಿರದೇ ಇದ್ದಲ್ಲಿ ಸಂವಿಧಾನದ ಇತರ ಅವಕಾಶಗಳನ್ನು ಉಲ್ಲಂಘಿಸುತ್ತಿದ್ದರೆ, ಅಂತಹ ಕಾಯ್ದೆಯನ್ನು ಮಾತ್ರ ಕಾನೂನುಬಾಹಿರ ಎಂದು ಘೋಷಿಸಬಹುದು ಎಂದು ನ್ಯಾಯಪೀಠ ತಿಳಿಸಿದೆ.

ಸಂಪಾದಕರು
ಲಾಗೈಡ್ ಕನ್ನಡ‌ ಕಾನೂನು ಮಾಸಪತ್ರಿಕೆ

Copyright © All rights reserved. | Newsphere by AF themes.