ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಆರೋಪಿಗೆ ಅಜೀವ ಜೈಲು ಶಿಕ್ಷೆ ವಿಧಿಸಿ ಹೈಕೋರ್ಟ್ ತೀರ್ಪು ನೀಡಿದೆ.
ಬೆಂಗಳೂರು: ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಆರೋಪಿಗೆ ಅಜೀವ ಜೈಲು ಶಿಕ್ಷೆ ವಿಧಿಸಿ ಹೈಕೋರ್ಟ್ ತೀರ್ಪು ನೀಡಿದೆ.
ಅನಿಲ್ ಬಾಲಗರ್ ಎಂಬ ಆರೋಪಿಗೆ ಹೈಕೋರ್ಟ್ ಈ ಶಿಕ್ಷೆ ವಿಧಿಸಿದೆ. ನ್ಯಾಯಮೂರ್ತಿಗಳಾದ ಇಷ್ರತ್ ಜಹಾನ್ ಅರ ಅವರು ಈ ತೀರ್ಪು ನೀಡಿದ್ದಾರೆ. ಅಪರಾಧಿ ಅನಿಲ್ ಬಾಲಗರ್ ಅವರಿಗೆ ಜೀವ ಇರುವವರೆಗೂ ಜೈಲಿನಲ್ಲಿರಬೇಕು. ಹತ್ತು ಸಾವಿರ ರೂಪಾಯಿ ದಂಡ ನೀಡಬೇಕು. ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾದ ಬಾಲಕಿಯ ಪಾಲಕರಿಗೆ ಎಂಟು ಲಕ್ಷ ರೂಪಾಯಿ ಪರಿಹಾರ ನೀಡಬೇಕೆಂದು ತೀರ್ಪು ನೀಡಲಾಗಿದೆ.
ಅನಿಲ್ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಈ ಘಟನೆ ಬೆಂಗಳೂರಿನಲ್ಲಿ 2017ರಲ್ಲಿ ನಡೆದಿತ್ತು.
ಪಬ್ಲಿಕ್ ಪ್ರಾಸಿಕ್ಯೂಟರ್ ಗೀತಾ ರಾಮಕೃಷ್ಣ ಗೊರವರ ಅವರು ವಾದ ಮಂಡಿಸಿದ್ದರು.
ಸಂಪಾದಕರು
ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ