ಸುಪ್ರೀಂಕೋರ್ಟ್ ಮೊರೆ ಹೋದ ಹೈಕೋರ್ಟ್ ಜಡ್ಜ್!
ನವದೆಹಲಿ: ಸಾಮಾನ್ಯ ಭವಿಷ್ಯ ನಿಧಿ (ಜಿಪಿಎಫ್) ಖಾತೆ ತೆರೆದು ತಮಗೆ ವೇತನ ನೀಡುವಂತೆ ಪಟ್ನಾ ಹೈಕೋರ್ಟ್ ನ್ಯಾಯಮೂರ್ತಿ ರುದ್ರಪ್ರಕಾಶ್ ಮಿಶ್ರಾ ಅವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾ.ಜೆ.ಬಿ.ಪರ್ದಿವಾಲಾ ಮತ್ತು ನ್ಯಾ.ಮನೋಜ್ ಮಿಶ್ರಾ ಅವರನ್ನು ಒಳಗೊಂಡ ತ್ರಿಸದಸ್ಯ ನ್ಯಾಯಪೀಠವು ಈ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡಿದೆ. ವಿಚಾರಣೆಯನ್ನು ಜನವರಿ 29ಕ್ಕೆ ಮುಂದೂಡಿದೆ. ಕೇಂದ್ರ ಸರಕಾರ ಹಾಗೂ ಬಿಹಾರ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಲಾಗಿದೆ. ಪಟ್ನಾ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಂದ ಮಾಹಿತಿ ಕೇಳಿದೆ.
ತಮಗೆ ಜಿಪಿಎಫ್ ಖಾತೆ ಮಂಜೂರು ಮಾಡಿಲ್ಲ. ಅಗತ್ಯ ದಾಖಲೆಗಳನ್ನು ನೀಡಿದ್ದರೂ ಈ ಖಾತೆ ತೆರೆದಿಲ್ಲ. ಇದರಿಂದ ತಮಗೆ ವೇತನ ಸಿಗುತ್ತಿಲ್ಲ ಎಂದು ನ್ಯಾ.ರುದ್ರಪ್ರಕಾಶ್ ಮಿಶ್ರಾ ತಮ್ಮ ಅರ್ಜಿಯಲ್ಲಿ ಹೇಳಿದ್ದಾರೆ.
ಸಂಪಾದಕರು
ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ