ನಿರ್ಲಕ್ಷ್ಯ ತೋರಿದ ಅಧಿಕಾರಿಗೆ ದಂಡ
ಬೆಂಗಳೂರು: ನ್ಯಾಯಾಲಯದ ಆದೇಶವಿದ್ದರೂ ಜಮೀನೊಂದರ ಪೋಡಿ ಹಾಗೂ ದಾಖಲೆ ಸರಿಪಡಿಸಲು ಕ್ರಮ ಕೈಗೊಳ್ಳದೇ ನಿರ್ಲಕ್ಷಿಸಿದ ಬೆಂಗಳೂರು ಭೂ ದಾಖಲೆಗಳ ಸಹಾಯಕ ನಿರ್ದೇಶಕ ಮೋಹನ್ ಕುಮಾರ್ ಅವರಿಗೆ ರಾಜ್ಯ ಹೈಕೋರ್ಟ್ ದಂಡ ವಿಧಿಸಿದೆ.
ಸೇವಾ ದಾಖಲೆಗಳಲ್ಲಿ ಪ್ರತಿಕೂಲ ಅಂಶವನ್ನು ದಾಖಲಿಸುವಂತೆ ಇಲಾಖೆ ಮುಖ್ಯಸ್ಥರಿಗೆ ಸೂಚನೆ ನೀಡಿದೆ.
ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರ ವಿಭಾಗೀಯ ಪೀಠವು ಈ ಕುರಿತು ತೀರ್ಪು ನೀಡಿದೆ.
ಬೆಂಗಳೂರಿನ ಯಲಹಂಕದ ರಾಜನಕುಂಟೆಯ ಜಯಲಕ್ಷ್ಮಮ್ಮ ಎಂಬುವರು ತಮ್ಮ ತಂದೆ ನಿಧನರಾಗಿದ್ದು ಜಮೀನಿನ ಪೋಡಿ ಮತ್ತು ದುರಸ್ತಿ ಮಾಡುವಂತೆ ತಹಶೀಲ್ದಾರ್ ಅವರಿಗೆ ಮನವಿ ಮಾಡಿದ್ದರು. ಈ ಕುರಿತು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಹೈಕೋರ್ಟ್ ಏಕಸದಸ್ಯ ಪೀಠ ವಿಚಾರಣೆ ನಡೆಸಿ ಮೂರು ತಿಂಗಳಲ್ಲಿ ಅರ್ಜಿದಾರರ ಜಮೀನಿನ ಪೋಡಿ ಮತ್ತು ದುರಸ್ತಿಗೆ ಕ್ರಮ ಕೈಗೊಳ್ಳಬೇಕೆಂದು ಭೂ ದಾಖಲೆಗಳ ಸಹಾಯಕ ನಿರ್ದೇಶಕ ಮೋಹನ್ ಕುಮಾರ್ ಅವರಿಗೆ ಆದೇಶಿಸಿದರು.
ಮೋಹನ್ ಕುಮಾರ್ ನ್ಯಾಯಾಲಯದ ಆದೇಶವನ್ನು ನಿರ್ಲಕ್ಷಿಸಿದರು. ಮೋಹನ್ ಕುಮಾರ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣವನ್ನು ದಾಖಲಿಸಲಾಗಿತ್ತು.
ಸಂಪಾದಕರು
ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ