The State Government has directed Mr. SG Sangreshi, the State Law Secretary, to take charge as the State Director of Public Prosecutions in addition.
ರಾಜ್ಯದ ಕಾನೂನು ಕಾರ್ಯದರ್ಶಿಯಾಗಿರುವ ಶ್ರೀ ಎಸ್ ಜಿ ಸಂಗ್ರೇಶಿ ಅವರನ್ನು ಹೆಚ್ಚುವರಿಯಾಗಿ ರಾಜ್ಯ ಅಭಿಯೋಜನಾ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಳ್ಳಲು ರಾಜ್ಯ ಸರ್ಕಾರ ನಿರ್ದೇಶನ ನೀಡಿದೆ. ಶ್ರೀ ಎಸ್ ಜಿ ಸಂಗ್ರೇಶಿ ಅವರು ಈ ಹಿಂದೆ ಮೈಸೂರು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶರಾಗಿ ಕಾರ್ಯ ನಿರ್ವಹಿಸಿರುತ್ತಾರೆ. ಪ್ರಸ್ತುತ ಅವರು ನಿರ್ವಹಿಸುತ್ತಿರುವ ರಾಜ್ಯ ಕಾನೂನು ಕಾರ್ಯದರ್ಶಿ ಹುದ್ದೆಯ ಜೊತೆಗೆ ಹೆಚ್ಚುವರಿಯಾಗಿ ಈ ಜವಾಬ್ದಾರಿಯನ್ನು ಸಹಾ ಅವರಿಗೆ ನೀಡಲಾಗಿದೆ. ಇಂದು ಹೆಚ್ಚುವರಿಯಾಗಿ ರಾಜ್ಯ ಅಭಿಯೋಜನಾ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡ ಶ್ರೀ ಜಿ ಎಸ್ ಸಂಗ್ರೇಶಿ ಅವರು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿ ಈ ಹುದ್ದೆ ಅಲಂಕರಿಸಿದ ಮೊದಲಿಗರು ಅನ್ನೋ ಹೆಗ್ಗಳಿಕೆಗೆ ಪಾತ್ರರಾದರು.
ಸಂಪಾದಕರು
ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ