SC, ST Atrocities Prevention Inquiry – Instruction for shooting of proceedings
ಎಸ್ ಸಿ, ಎಸ್ ಟಿ ದೌರ್ಜನ್ಯ ತಡೆ ವಿಚಾರಣೆ
ಕಲಾಪಗಳ ಚಿತ್ರೀಕರಣಕ್ಕೆ ಸೂಚನೆ
ಮುಂಬೈ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿರುದ್ಧದ ದೌರ್ಜನ್ಯ ತಡೆ ಕಾಯ್ದೆಗೆ ಸಂಬಂಧಪಟ್ಟಂತೆ ಪ್ರಕರಣಗಳ ನ್ಯಾಯಾಂಗ ವಿಚಾರಣೆ ಸೇರಿದಂತೆ ಎಲ್ಲ ಕಲಾಪಗಳ ವಿಡಿಯೋ ಚಿತ್ರೀಕರಣ ಮಾಡುವುದು ಕಡ್ಡಾಯ ಎಂದು ಬಾಂಬೆ ಹೈಕೋರ್ಟ್ ಹೇಳಿದೆ.
ಮುಖ್ಯ ನ್ಯಾಯಮೂರ್ತಿ ಡಿ.ಕೆ.ಉಪಾಧ್ಯಾಯ ಅವರಿದ್ದ ನ್ಯಾಯಪೀಠ ಈ ಕುರಿತು ಆದೇಶಿಸಿದೆ.
ಎಸ್ ಸಿ ಮತ್ತು ಎಸ್.ಟಿ ದೌರ್ಜನ್ಯ ತಡೆ ಕಾಯ್ದೆ ಕೈಪಿಡಿಯಲ್ಲ. ಇದು ಕಡ್ಡಾಯವಾಗಿದೆ. ಈ ಕಾಯ್ದೆಗೆ ಸಂಬಂಧಪಟ್ಟ ಯಾವುದೇ ವಿಚಾರಣೆ ಇದ್ದರೂ ಇದರ ವಿಡಿಯೋ ಚಿತ್ರೀಕರಣ ಅಗತ್ಯ ಎಂದು ನ್ಯಾಯಪೀಠ ಹೇಳಿದೆ.
ಪ್ರಕರಣದ ಸಂತ್ರಸ್ತರು ಹಾಗೂ ಸಾಕ್ಷಿಗಳಿಗೆ ಪ್ರಕರಣ ಕುರಿತು ಮಾಹಿತಿ ನೀಡಬೇಕು ಎಂದು ಹೈಕೋರ್ಟ್ ಸೂಚಿಸಿದೆ.
ಪಾಯಲ್ ತಡವಿ ಎಂಬುವರು ೨೦೧೯ರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಪಾಯಲ್ ಸಾವಿಗೆ ಮೂವರು ಕುಮ್ಮಕ್ಕು ನೀಡಿದ್ದರೆಂದು ಆರೋಪಿಸಲಾಗಿತ್ತು ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಲಾಯಿತು.
ಸಂಪಾದಕರು
ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ