23/12/2024

Law Guide Kannada

Online Guide

The High Court has upheld the dismissal of an engineer of Hindustan Aeronautics Limited

ಎಚ್‌ಎಎಲ್ ಎಂಜಿನಿಯರ್ ವಜಾ – ಆದೇಶ ಎತ್ತಿ ಹಿಡಿದ ಹೈಕೋರ್ಟ್
ಬೆಂಗಳೂರು; ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನ ಎಂಜಿನಿಯರ್ ಒಬ್ಬರನ್ನು ಸೇವೆಯಿಂದ ವಜಾಗೊಳಿಸಿದ ಕ್ರಮವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.
ಮುಖ್ಯ ನ್ಯಾಯಮೂರ್ತಿ ಎನ್.ಜಿ. ಅಂಜಾರಿಯ ಹಾಗೂ ನ್ಯಾ.ಕೃಷ್ಣ ಎಸ್.ದೀಕ್ಷಿತ್ ಅವರ ವಿಭಾಗೀಯ ಪೀಠವು ಈ ಆದೇಶ ಹೊರಡಿಸಿದೆ.

ಸೇವೆಯಿಂದ ವಜಾ ಆದ ಈ ಎಂಜಿನಿಯರ್ ಕರ್ತವ್ಯಕ್ಕೆ ಅನಧಿಕೃತವಾಗಿ ಗೈರು ಹಾಜರಾಗಿದ್ದಾರೆ. ಇದು ಗಂಭೀರವಾದ ಅಶಿಸ್ತಿನ ವರ್ತನೆ ಎಂದು ನ್ಯಾಯಾಲಯ ಹೇಳಿದೆ.
ಎಂಜಿನಿಯರ್ ಎ.ಕೆ.ಸಿನ್ಹಾ ಎಂಬುವರು ಸೆಪ್ಟೆಂಬರ್ 22, 2016 ರಿಂದ ಜನವರಿ 6, 2017ರ ವರೆಗೆ ಅನಧಿಕೃತವಾಗಿ ಗೈರು ಹಾಜರಾಗಿದ್ದರು. ಇಲಾಖಾ ವಿಚಾರಣೆ ನಂತರ ಅವರನ್ನು ಸೇವೆಯಿಂದ ವಜಾಗೊಳಿಸಲಾಯಿತು.

ಈ ಪ್ರಕರಣದಲ್ಲಿ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಎಚ್‌ಎಎಲ್ ಆಡಳಿತ ವರ್ಗವು ವಿಭಾಗೀಯ ಪೀಠದಲ್ಲಿ ಪ್ರಶ್ನಿಸಿತ್ತು.

ಸಂಪಾದಕರು
ಲಾಗೈಡ್ ಕನ್ನಡ‌ ಕಾನೂನು ಮಾಸಪತ್ರಿಕೆ

Copyright © All rights reserved. | Newsphere by AF themes.