How can Kannadigas not be appointed to higher posts? High Court question
ಕನ್ನಡಿಗರನ್ನು ಉನ್ನತ ಹುದ್ದೆಗಳಿಗೆ ನೇಮಿಸದಿದ್ದರೆ ಹೇಗೆ? ಹೈಕೋರ್ಟ್ ಪ್ರಶ್ನೆ
ಬೆಂಗಳೂರು: ರಾಜ್ಯದ ನೆಲ, ಜಲವನ್ನು ಪಡೆದು ಅಧಿಕಾರಿಗಳ ಹುದ್ದೆಗಳಿಗೆ ಕನ್ನಡಿಗರನ್ನು ನೇಮಿಸದ ಕನ್ನಡೇತರ ಕಂಪನಿಗಳ ಸ್ಥಾಪಕರನ್ನು ರಾಜ್ಯ ಹೈಕೋರ್ಟ್ ಬುಧವಾರ ತರಾಟೆಗೆ ತೆಗೆದುಕೊಂಡಿದೆ.
ಕನ್ನಡಿಗರನ್ನು ಉನ್ನತ ಹುದ್ದೆಗಳಿಗೆ ನೇಮಿಸುತ್ತಿಲ್ಲ. ಜವಾನ, ಜಾಡಮಾಲಿಯಂತಹ ಉದ್ಯೋಗಗಳಿಗೆ ಮಾತ್ರ ಕನ್ನಡಿಗರನ್ನು ನೇಮಿಸಿದರೆ ಹೇಗೆ? ಎಲ್ಲ ಹಂತದ ಹುದ್ದೆಗಳಿಗೂ ಕನ್ನಡಿಗರಿಗೆ ಅವಕಾಶ ಕಲ್ಪಿಸಬೇಕು ಎಂದು ಹೈಕೋರ್ಟ್ ಹೇಳಿದೆ.
ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು ನಾಲ್ಕೂವರೆ ಎಕರೆ ಜಾಗವನ್ನು ಐಡಿಬಿಐ ಬ್ಯಾಂಕ್ ಗೆ ಮಂಜೂರು ಮಾಡಿತ್ತು. ನಂತರ ಇದನ್ನು ರದ್ದುಪಡಿಸಿತು. ಐಡಿಬಿಐ ಬ್ಯಾಂಕ್ ಇದನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದೆ. ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೈಕೋರ್ಟ್ ಕೆಐಎಡಿಬಿ ಮತ್ತು ಬ್ಯಾಂಕ್ ಗೆ ಸೂಚಿಸಿದೆ.
ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿತು.
ಎರಡು ವರ್ಷಗಳಲ್ಲಿ ಯೋಜನೆ ಜಾರಿಗೊಳಿಸಬೇಕು, ಅಧಿಕಾರಿ ಹುದ್ದೆಗಳಿಗೆ ಕನ್ನಡಿಗರನ್ನು ನೇಮಿಸಬೇಕೆಂದು ಕೆಐಎಡಿಬಿ ಷರತ್ತು ವಿಧಿಸಿತ್ತು. ಆದರೆ, ಈ ಷರತ್ತನ್ನು ಬ್ಯಾಂಕ್ ಪಾಲಿಸಿಲ್ಲ. ಜಮೀನು ಮಂಜೂರು ರದ್ದು ಆದೇಶ ಪ್ರಶ್ನಿಸಿ ಬ್ಯಾಂಕ್ ಮೊದಲು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಜಾ ಮಾಡಿತ್ತು. ಇದನ್ನು ಪ್ರಶ್ನಿಸಿ ಬ್ಯಾಂಕ್ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದೆ.
ಸಂಪಾದಕರು
ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ
ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ