Prostitution case: Trial against woman victim canceled: High court says no action can be taken
ಬೆಂಗಳೂರು: ವೇಶ್ಯಾವಾಟಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ಷಣೆ ಮಾಡಿದ ಸಂತ್ರಸ್ತ ಮಹಿಳೆಯ ವಿರುದ್ದ ಅನೈತಿಕ ಸ0ಚಾರ ತಡೆ ಕಾಯ್ದೆ ಅಡಿ ಶಿಕ್ಷಾರ್ಹ ಅಪರಾಧಕ್ಕಾಗಿ ವಿಚಾರಣೆಗೆ ಗುರಿಪಡಿಸಲಾಗುವುದಿಲ್ಲ. ಸಂತ್ರಸ್ತ ಮಹಿಳೆ ವಿರುದ್ದ ಕ್ರಮ ಜರುಗಿಸಲು ಸಾಧ್ಯವಿಲ್ಲ ಎ0ದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಹೈಕೋರ್ಟ್ನ ನ್ಯಾ. ಎಂ. ನಾಗಪುಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ತೀರ್ಪು ನೀಡಿದೆ. ಅನೈತಿಕ ಸ0ಚಾರ ತಡೆ ಕಾಯ್ದೆಯ ಸೆಕ್ಷನ್ 5ರ ಅಡಿಯಲ್ಲಿ ದಾಖಲಿಸಿರುವ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ವೇಶ್ಯಾವಾಟಿಕೆಯಲ್ಲಿ ರಕ್ಷಣೆ ಮಾಡಲಾಗಿದ್ದ ಸಂತ್ರಸ್ತ ಮಹಿಳೆ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ನ ನ್ಯಾ. ಎಂ. ನಾಗಪುಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅನೈತಿಕ ಸ0ಚಾರ ತಡೆ ಕಾಯ್ದೆಯ ಉದ್ದೇಶ ವೇಶ್ಯಾವಾಟಿಕೆಯನ್ನು ಅಥವಾ ವೇಶ್ಯೆಯರನ್ನು ನಿರ್ಮೂಲನೆ ಮಾಡುವುದಲ್ಲ. ಕಾನೂನಿನಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿರುವ ಸಂತ್ರಸ್ತೆಯರಿಗೆ ದ0ಡ ವಿಧಿಸುವ ನಿಯಮಗಳೂ ಇಲ್ಲ. ಇದರ ಬದಲಿಗೆ, ವಾಣಿಜ್ಯ ಉದ್ದೇಶಗಳಿಗೆ ಲೈಂಗಿಕ ಶೋಷಣೆ ನಡೆಸುವವರನ್ನು ವೇಶ್ಯಾವಾಟಿಕೆಯಲ್ಲಿ ಮಹಿಳೆಯರನ್ನು ತೊಡಗಿಸಿ ಅದರಿಂದ ಹಣ ಗಳಿಸುವವರನ್ನು ಹಾಗೂ ಅ0ತಹ ಸಂಪಾದನೆಯ ಮೇಲೆ ಜೀವನ ನಡೆಸುವವರನ್ನು ಶಿಕ್ಷಿಸಲು ಈ ಕಾಯ್ದೆ ಜಾರಿಗೆ ತರಲಾಗಿದೆ ಎ0ದು ನ್ಯಾಯಪೀಠ ಸ್ಪಷ್ಟಪಡಿಸಿತು.
ಅರ್ಜಿದಾರರು ಮಹಿಳೆಯಾಗಿದ್ದು, ಪ್ರಕರಣದ ಸಂತ್ರಸ್ತೆಯಾಗಿದ್ದಾರೆ. ಈ ವಿಚಾರದಲ್ಲಿ ಯಾವುದೇ ವಿವಾದವಿಲ್ಲ. ಕಾನೂನಿನಲ್ಲಿ ಸಂತ್ರಸ್ತೆಯ ವಿರುದ್ಧ ಕ್ರಮ ಜರುಗಿಸಲು ಸಾಧ್ಯವಿಲ್ಲ. ಸಂತ್ರಸ್ತೆಯ ವಿರುದ್ಧ ಪೊಲೀಸರು ಕಾಯ್ದೆಯ ಸೆಕ್ಷನ್ 5ರ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ ಎ0ಬುದನ್ನು ಗಮನಿಸಿದ ನ್ಯಾಯಪೀಠವು, ಸೆಕ್ಸನ್ 5 “ವೇಶ್ಯಾವಾಟಿಕೆಗಾಗಿ ಮಹಿಳೆಯರನ್ನು ಕೂಡಿ ಹಾಕುವುದು, ಕೀಳು ವೃತ್ತಿಗೆ ಪ್ರೇರೇಪಿಸುವುದು ಅಥವಾ ಕರೆದೊಯ್ಯುವುದನ್ನು ಶಿಕ್ಷಾರ್ಹ ಅಪರಾಧವಾಗಿಸುತ್ತದೆ. ಎಲ್ಲಿಯೂ ಸಂತ್ರಸ್ತ ಮಹಿಳೆಗೆ ಶಿಕ್ಕಿಸುವ ಕುರಿತು ಹೇಳುವುದಿಲ್ಲ. ಹೀಗಿದ್ದಾಗ ಪ್ರಕರಣವನ್ನು ಸಂತ್ರಸ್ತೆಯ ವಿರುದ್ಧ ಮು0ದುವರೆಸಲು ಬಿಟ್ಟರೆ ಕಾನೂನಿನ ದುರುಪಯೋಗವಾಗಲಿದೆ ಎ0ದು ಅಭಿಪ್ರಾಯಪಟ್ಟಿ ಅರ್ಜಿದಾರ ಮಹಿಳೆಯ ವಿರುದ್ಧದ ವಿಚಾರಣೆಯನ್ನು ರದ್ದುಪಡಿಸಿ ಆದೇಶ ಹೊರಡಿಸಿತು.
ವೇಶ್ಯಾವಾಟಿಕೆ ಪ್ರಕರಣದ ಆರೋಪಿಗಳು ಚಿಕ್ಕಮಗಳೂರು ಮೂಲದ 29 ವರ್ಷದ ಮಹಿಳೆಯೂ ಸೇರಿದಂತೆ ಕೆಲ ಮಹಿಳೆಯರನ್ನು ಉಡುಪಿಯಿಂದ ಗೋವಾಕ್ಕೆ ವೇಶ್ಯಾವಾಟಿಕೆ ಮೂಲಕ ಹಣ ಗಳಿಸಲು ತಲಾ 10 ಸಾವಿರ ಮುಂಗಡ ನೀಡಿ ಕರೆದೊಯ್ಯುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಕು0ದಾಪುರ ಠಾಣೆಯ ಮಹಿಳಾ ಪೊಲೀಸರು ಟೆಂಪೊ ಟ್ರಾವೆಲರ್ ತಡೆದು ಅರ್ಜಿದಾರ ಮಹಿಳೆಯೂ ಸೇರಿದಂತೆ ಒಟ್ಟು 9 ಮಂದಿಯನ್ನು ಬಂಧಿಸಿದ್ದರು.
ಸಂತ್ರಸ್ತ ಮಹಿಳೆಯ ಸಹಿತ ಆರೋಪಿಗಳ ವಿರುದ್ದ ಕಾಯ್ದೆಯ ಸೆಕ್ಟನ್ 5ರಡಿಯಲ್ಲಿ ಎಫ್ ಐಆರ್ ದಾಖಲಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ಕು0ದಾಪುರ ಜೆಎ0ಎಫ್ಸಿ ನ್ಯಾಯಾಲಯ ಆರೋಪಿತರ ವಿರುದ್ದ ಕಾಗ್ನಿಜೆನ್ಸ್ ತೆಗೆದುಕೊಂಡಿತ್ತು. ಈ ಹಿನ್ನೆಲೆಯಲ್ಲಿ ಅರ್ಜಿದಾರ ಮಹಿಳೆ ಹೈಕೋರ್ಟ್ ಮೊರೆ ಹೋಗಿದ್ದರು. ಇದೀಗ ಹೈಕೋರ್ಟ್ ಸಂತ್ರಸ್ತ ಮಹಿಳೆಯ ವಿರುದ್ದದ ವಿಚಾರಣೆ ರದ್ದುಪಡಿಸಿದೆ.
ಸಂಪಾದಕರು
ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ