ಹೆಚ್ಚಿದ ಭ್ರೂಣ ಹೆಣ್ಣು ಪತ್ತೆ ಮತ್ತು ರ‍್ಭಪಾತ: ಹೈಕರ‍್ಟ್ ಕಳವಳ: ಪ್ರೇರಣೆ ನೀಡುವವರ ಬಂಧನಕ್ಕೆ ಆದೇಶ
ಹೆಚ್ಚಿದ ಭ್ರೂಣ ಹೆಣ್ಣು ಪತ್ತೆ ಮತ್ತು ರ‍್ಭಪಾತ: ಹೈಕರ‍್ಟ್ ಕಳವಳ: ಪ್ರೇರಣೆ ನೀಡುವವರ ಬಂಧನಕ್ಕೆ ಆದೇಶ
ಬೆಂಗಳೂರು: ಮೈಸೂರು ಮಂಡ್ಯ ಸೇರಿದಂತೆ ರಾಜ್ಯದ ವಿವಿಧ ಭಾಗಗಲ್ಲಿ ಕಾನೂನು ಬಾಹಿರವಾಗಿ ಹೆಣ್ಣು ಭ್ರೂಣ ಲಿಂಗ ಪತ್ತೆ ಮಾಡಿ ರ‍್ಭಪಾತಕ್ಕೆ ಪ್ರೇರೇಪಿಸುತ್ತಿರುವ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿವೆ ಎಂದು ಕಳವಳ ವ್ಯಕ್ತಪಡಿಸಿರುವ ಹೈಕರ‍್ಟ್ ಭ್ರೂಣ ರ‍್ಭಪಾತಕ್ಕೆ ನೀಡುವವರನ್ನ ಬಂಧಿಸಿ ವಿಚಾರಣೆಗೊಳಪಡಿಸಿ ಎಂದು ಆದೇಶ ನೀಡಿದೆ.
ಭ್ರೂಣ ಹತ್ಯೆಗೆ ಪ್ರೇರೇಪಿಸಿದ್ದ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ತಿರಸ್ಕರಿಸಿದ ನ್ಯಾಯಮರ‍್ತಿ ಎಂ.ಜಿ.ಉಮಾ ಅವರಿದ್ದ ನ್ಯಾಯಪೀಠ, ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಲು ಸೂಚನೆ ನೀಡಿದೆ.
ಪ್ರಕರಣದ ಆರೋಪಿಗಳಾಗಿದ್ದು, ಬಂಧನ ಭೀತಿ ಎದುರಿಸುತ್ತಿದ್ದ ನಾಗಮಂಗಳ ತಾಲೂಕಿನ ದೇವರಮಾವಿನಕೆರೆ ಗ್ರಾಮದ ನಿವಾಸಿ ಧನಂಜೇಗೌಡ ನಿವಾಸಿ, ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಎ.ಎಲ್.ಸತೀಶ್ ಮತ್ತು ಮೈಸೂರು ತಾಲೂಕಿನ ನಾಡನಹಳ್ಳಿ ಗ್ರಾಮದ ಪುಟ್ಟರಾಜು ಎಂಬುವವರು ನಿರೀಕ್ಷಣಾ ಜಾಮೀನು ಕೋರಿ ರ‍್ಜಿ ಸಲ್ಲಿಸಿದ್ದರು.
ರ‍್ಜಿ ವಜಾಗೊಳಿಸಿದ ನ್ಯಾಯಮರ‍್ತಿ ಎಂ.ಜಿ.ಉಮಾ ಅವರಿದ್ದ ನ್ಯಾಯಪೀಠ , ಪ್ರಕರಣದಲ್ಲಿ ರ‍್ಜಿದಾರರು ೬, ೭ ಮತ್ತು ೯ನೇ ಆರೋಪಿಗಳಾಗಿದ್ದು, ರ‍್ಭಿಣಿಯರನ್ನು ಗುರುತಿಸುವ ಮಧ್ಯರ‍್ತಿಗಳಾಗಿದ್ದಾರೆ. ರ‍್ಭಿಣಿಯರಿಗೆ ರ‍್ಭಪಾತಕ್ಕೆ ಒಳಗಾಗುವಂತೆ ಪ್ರೇರೇಪಿಸಿರುವ ಗಂಭೀರ ಆರೋಪ ರ‍್ಜಿ ದಾರರ ಮೇಲಿದೆ. ೨೦೨೪ರ ಏ.೨೪ರಂದು ಪ್ರಕರಣ ದಾಖಲಾಗಿದೆ. ಈವರೆಗೂ ಆರೋಪಿಗಳು ವಿಚಾರಣೆಗೆ ಹಾಜರಾಗಿಲ್ಲ. ಆದ್ದರಿಂದ ನಿರೀಕ್ಷಣಾ ಜಾಮೀನು ನೀಡಲು ಪಡೆಯಲು ರ‍್ಜಿದಾರರು ರ‍್ಹರಲ್ಲ. ರ‍್ಜಿದಾರರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು. ಇಂತಹ ಘಟನೆಗಳನ್ನು ತಡೆಯಲು ಅಗತ್ಯ ಕ್ರಮ ಜರುಗಿಸಬೇಕಿದೆ ಎಂದು ಅಭಿಪ್ರಾಯಪಟ್ಟಿದೆ.
ಭ್ರೂಣಗಳ ಆರೋಗ್ಯ ಪರೀಕ್ಷೆಗಾಗಿ ವೈದ್ಯಕೀಯ ಕೇಂದ್ರಗಳಿಗೆ ಬರುವ ರ‍್ಭಿಣಿಯರಿಗೆ ರ‍್ಜಿದಾರರು ಭ್ರೂಣ ಪತ್ತೆಗೆ ಸಂಬಂಧಿಸಿದಂತೆ ಮಾಹಿತಿ ನೀಡುತ್ತಿದ್ದರು. ರ‍್ಭದಲ್ಲಿ ಹೆಣ್ಣು ಮಗು ಇದ್ದರೆ, ಆ ಬಗ್ಗೆ ಮಾಹಿತಿ ನೀಡಿ ರ‍್ಭಪಾತ ಮಾಡಿಸಲು ವ್ಯವಸ್ಥೆ ಸಹ ಮಾಡುತ್ತಿದ್ದರು. ಅದಕ್ಕಾಗಿ ಹಣ ಪಡೆದುಕೊಳ್ಳುತ್ತಿದ್ದರು ಎಂಬ ಆರೋಪ ರ‍್ಜಿದಾರರ ಮೇಲಿದೆ.
ರ‍್ಜಿದಾರರು, ಭ್ರೂಣಗಳ ಆರೋಗ್ಯ ಪರೀಕ್ಷೆಗಾಗಿ ಲ್ಯಾಬ್ಗಳಿಗೆ ಬರುವ ಮಹಿಳೆಯರಿಗೆ ಭ್ರೂಣ ಪತ್ತೆಗೆ ಸಂಬಂಧಿಸಿದಂತೆ ಮಾಹಿತಿ ನೀಡುತ್ತಿದ್ದರು. ಬಳಿಕ ಅವರಿಗೆ ಭ್ರೂಣ ಹತ್ಯೆಗೆ ಪ್ರೇರೇಪಿಸುತ್ತಿದ್ದರು. ಬಳಿಕ ಪ್ರಕರಣದಲ್ಲಿ ಇನ್ನಿತರೆ ಆರೋಪಿಗಳೊಂದಿಗೆ ಮಂಡ್ಯ ಜಿಲ್ಲೆಯ ಹಾಡ್ಯ ಗ್ರಾಮದಲ್ಲಿ ಆಲೆ ಮನೆಯಲ್ಲಿ ಪರೀಕ್ಷೆ ಮಾಡಿಸಿ ಹೆಣ್ಣು ಮಗು ಎಂದು ಗೊತ್ತಾದರೆ, ರ‍್ಭಪಾತ ಮಾಡಿಸುತ್ತಿದ್ದರು. ಕಮಿಷನ್ ರೂಪದಲ್ಲಿ ಹಣ ಪಡೆದುಕೊಳ್ಳುತ್ತಿದ್ದರು.
ಈ ಸಂಬಂಧ ಮಾಹಿತಿ ಪಡೆದ ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು. ಈ ಸಂಬಂಧ ಜಾಮೀನು ಕೋರಿ ಆರೋಪಿಗಳು ಕರ‍್ಟ್ ಗೆ ರ‍್ಜಿ ಸಲ್ಲಿಕೆ ಮಾಡಿದ್ದರು.
ಸಂಪಾದಕರು
ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ