23/12/2024

Law Guide Kannada

Online Guide

ಜಡ್ಜ್ ಪತ್ನಿ ಅನುಮಾನಸ್ಪದ ಸಾವು ಪ್ರಕರಣಕ್ಕೆ ಮಹತ್ವದ ತಿರುವು:ಅಃI ತನಿಖೆಗೆ ಸುಪ್ರೀಂಕೋರ್ಟ್ ಆದೇಶ

ನವದೆಹಲಿ: ಹಿರಿಯ ನ್ಯಾಯಾಂಗ ಅಧಿಕಾರಿಯೊಬ್ಬರ ಪತ್ನಿಯ ಅನುಮಾನಾಸ್ಪದ ಸಾವು ಪ್ರಕರಣವೀಗ ಮಹತ್ವದ ತಿರುವು ಪಡೆದುಕೊಂಡಿದ್ದು, ಪೊಲೀಸರ ಪಕ್ಷಪಾತ ಧೋರಣೆ ವಿರುದ್ದ ಮೃತರ ತಾಯಿ ದೂರು ನೀಡಿದ ಹಿನ್ನೆಲೆಯಲ್ಲಿ ಸಿಬಿಐ ತನಿಖೆಗೆ ಸುಪ್ರೀಂಕೋರ್ಟ್ ಆದೇಶಿಸಿದೆ.

2016ರಲ್ಲಿ ನ್ಯಾಯಾಂಗ ಅಧಿಕಾರಿಯ ಪತ್ನಿ ರಂಜನಾ ದಿವಾನ್ ಅವರು ಮೃತಪಟ್ಟಿದ್ದರು. ಸಾವಿನ ನಂತರ, ಆಕೆಯ ಸಾವಿನ ಬಗ್ಗೆ ಅನುಮಾನ ಉಂಟಾಗಿದ್ದು, ಸ್ವತಃ ಅವರ ಕುಟುಂಬಸ್ಥರು ಈ ಅನುಮಾನ ವ್ಯಕ್ತಪಡಿಸಿ, ಪತಿ ನ್ಯಾಯಾಂಗ ಅಧಿಕಾರಿಯಾಗಿರುವ ಕಾರಣ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಮನವಿ ಮಾಡಿದ್ದರು. ಛತ್ತೀಸ್‌ ಗಢ ಪೊಲೀಸರು ಈ ಸಾವಿನ ತನಿಖೆಯಲ್ಲಿ ಪಕ್ಷಪಾತದ ಧೋರಣೆ ಅನುಸರಿಸಿದ್ದಾರೆ. ಅನಗತ್ಯವಾದ ಪ್ರಭಾವಕ್ಕೊಳಗಾಗಿದ್ದಾರೆ ಎಂದು ಮೃತರ ತಾಯಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ದೂರಿನಲ್ಲಿ ಆರೋಪಿಸಿದ್ದರು.

ಇಡೀ ಘಟನೆ ಮತ್ತು ಮರಣದ ಸಂದರ್ಭದಲ್ಲಿ ಮೃತರ ದೇಹದಲ್ಲಿ ಕಂಡುಬಂದಿರುವ ಗಾಯಗಳ ಬಗ್ಗೆ ಗಂಭೀರವಾದ ತನಿಖೆ ನಡೆಸುವಂತೆ ನಿರ್ದೇಶನ ನೀಡಬೇಕು ಎಂದು ಅವರು ಸುಪ್ರೀಂ ಕೋರ್ಟ್‌ ಗೆ ಮನವಿ ಮಾಡಿದ್ದರು.

ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ನ್ಯಾ. ವಿಕ್ರಮ್‌ನಾಥ್ ಮತ್ತು ಪ್ರಸನ್ನ ಬಾಲಚಂದ್ರ ವರಾಳೆ ಅವರಿದ್ದ ವಿಭಾಗೀಯ ನ್ಯಾಯಪೀಠ, ಪ್ರಕರಣದ ತನಿಖೆ ನಡೆಸುವಂತೆ ಸಿಬಿಐಗೆ ನಿರ್ದೇಶನ ನೀಡಿದೆ.

ರಂಜನಾ ಅವರು ಪತಿ ಪ್ರಸ್ತುತ ಹುದ್ದೆಯಲ್ಲಿ ಕರ್ತವ್ಯ ನಿರತ ನ್ಯಾಯಾಧೀಶರಾಗಿರುವುದರಿಂದ ನ್ಯಾಯಯುತ ತನಿಖೆಗೆ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಮೃತರ ದೇಹದ ಮೇಲೆ ಆರು ಗಾಯಗಳಿವೆ ಎಂಬುದನ್ನು ಮರಣೋತ್ತರ ಪರೀಕ್ಷಾ ವರದಿಗಳು ತಿಳಿಸಿವೆ ಎಂಬುದನ್ನು ಮೃತ ರಂಜನಾ ಅವರ ತಾಯಿ ಕಳವಳ ವ್ಯಕ್ತಪಡಿಸಿದ್ದರು.

ಇದನ್ನು ಗಮನಿಸಿದ ನ್ಯಾಯಪೀಠ, ಪ್ರಕರಣದ ಸಂಪೂರ್ಣ ಸನ್ನಿವೇಶವನ್ನು ಪರಿಗಣಿಸಿ ಮೃತ ಮಹಿಳೆಯ ಸಾವಿನ ತನಿಖೆ ನಡೆಸುವಂತೆ ಸಿಬಿಐಗೆ ಸೂಚನೆ ನೀಡಿತು. ಪ್ರಕರಣವನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು, ತನಿಖೆಗೆ ಸರ್ಕಾರ ಮತ್ತು ಸಂಬಂಧಪಟ್ಟ ಇಲಾಖೆಗಳು ಸಹಕರಿಸಬೇಕು ಎಂದು ನಿರ್ದೇಶನ ನೀಡಿ, ಅಗತ್ಯವಿರುವ ಎಲ್ಲ ದಾಖಲೆಗಳು ಮತ್ತು ತನಿಖೆಗೆ ಬೇಕಾದ ಅ ನೆರವನ್ನು ನೀಡುವಂತೆ ರಾಜ್ಯ ಸರ್ಕಾರ ಮತ್ತು ಎಲ್ಲ ಇಲಾಖೆಗೆ ಸೂಚನೆ ನೀಡಿದೆ.

ಸಂಪಾದಕರು
ಲಾಗೈಡ್ ಕನ್ನಡ‌ ಕಾನೂನು ಮಾಸಪತ್ರಿಕೆ

Copyright © All rights reserved. | Newsphere by AF themes.