ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್: ಗೌಪ್ಯ ವಿಚಾರಣೆಗೆ ಹೈಕೋರ್ಟ್ ನಕಾರ
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ಸಲ್ಲಿಸಲಾಗಿರುವ ಅರ್ಜಿಗಳ ಗೌಪ್ಯ ವಿಚಾರಣೆಗೆ ಹೈಕೋರ್ಟ್ ನಿರಾಕರಿಸಿದೆ.
ಹೊಳೆನರಸೀಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮತ್ತು ಬೆಂಗಳೂರಿನ ಸೈಬರ್ ಠಾಣೆಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣಗಳಲ್ಲಿ ಜಾಮೀನು ಕೋರಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಅರ್ಜಿಗಳನ್ನು ನ್ಯಾ. ಎಂ ನಾಗಪ್ರಸನ್ನ ಅವರಿದ್ದ ಪೀಠ ವಿಚಾರಣೆ ನಡೆಸುತ್ತಿದ್ದು ಈ ಮಧ್ಯೆ ಗೌಪ್ಯ ವಿಚಾರಣೆಗೆ ನ್ಯಾಯಪೀಠ ನಿರಾಕರಿಸಿದೆ. ಅರ್ಜಿಗಳನ್ನು ಮುಕ್ತ ನ್ಯಾಯಾಲಯದಲ್ಲಿಯೇ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದೆ.
ನ್ಯಾಯಾಲಯ ನಿತ್ಯವೂ ಇಂತಹ ಪ್ರಕರಣಗಳನ್ನು ವಿಚಾರಣೆ ನಡೆಸುತ್ತಿದೆ. ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ವಿಶೇಷವಾದದ್ದೇನೂ ಇಲ್ಲ. ಹೀಗಾಗಿ, ವಿಚಾರಣೆ ವೇಳೆ ಸಂತ್ರಸ್ತರ ಹೆಸರು ಮತ್ತು ಅಶ್ಲೀಲ ವಿಚಾರಗಳನ್ನು ವಕೀಲರು ಓದಬಾರದು. ಬದಲಿಗೆ ಅಂತಹ ವಿವರವನ್ನು ತಿಳಿಸಿದರೆ ನಾನೇ ಓದಿಕೊಳ್ಳುತ್ತೇನೆ ಎಂದು ತಿಳಿಸಿದ ನ್ಯಾಯಪೀಠ ಪ್ರಕರಣದ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 19ಕ್ಕೆ ಮುಂದೂಡಿತು.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಹೊಳೆನರಸೀಪುರದ ನಗರ ಠಾಣೆಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ 2,144 ಪುಟಗಳ ಆರೋಪಪಟ್ಟಿ ಸಲ್ಲಿಸಿದೆ. ಮನೆಗೆಲಸದಾಕೆಯ ಮೇಲೆ ಎಸಗಿದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ 1,632 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ.
ಸಂಪಾದಕರು
ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ