ಪತಿ ಪ್ರೇಯಸಿಯ ವಿರುದ್ಧ ವರದಕ್ಷಿಣೆ ಕಿರುಕುಳ ಕೇಸ್ ದಾಖಲಿಸಲು ಸಾಧ್ಯವಿಲ್ಲ – ಸುಪ್ರೀಂ ಕೋರ್ಟ್
ನವದೆಹಲಿ: ಪತಿಯ ಗೆಳತಿ ಆಗಿರುವುದಕ್ಕೆ ಅಥವಾ ಆತನ ಜೊತೆ ಪ್ರಣಯ ಸಂಬಂಧ ಹೊಂದಿರುವ ಆರೋಪದ ಮೇಲೆ ಆಕೆಯ ವಿರುದ್ಧ ಆತನ ಪತ್ನಿಯು ವರದಕ್ಷಿಣೆ ಕಿರುಕುಳ ಕೇಸ್ ದಾಖಲಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ತಿಳಿಸಿದೆ.
ಐಪಿಸಿ ಸೆಕ್ಷನ್ 498 ಎ, 504 ಮತ್ತು 109 ಹಾಗೂ ವರದಕ್ಷಿಣೆ ನಿಷೇಧ ಕಾಯ್ದೆಯ ಸೆಕ್ಷನ್ 3 ಮತ್ತು 4ರ ಅಡಿಯಲ್ಲಿ ತಮ್ಮ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ಹಾಗೂ ನಂತರದ ದೋಷಾರೋಪ ಪಟ್ಟಿಯನ್ನು ಪ್ರಶ್ನಿಸಿ, ಮಹಿಳೆಯೊಬ್ಬರು ಸಲ್ಲಿಸಿದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿತು.
2021ರ ಎಪ್ರಿಲ್ 12ರಂದು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವೊಂದನ್ನು ರದ್ದು ಪಡಿಸಿದ ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ ಬಿ ಆರ್ ಗವಾಯಿ ಮತ್ತು ಕೆವಿ ವಿಶ್ವನಾಥನ್ ಅವರು ಇದ್ದ ವಿಭಾಗಿಯ ಪೀಠವು, ಪತಿಯ ಪ್ರೇಯಸಿ ವಿರುದ್ದ ಭಾರತೀಯ ದಂಡ ಸಾಹಿತಿ ಐಪಿಸಿ ಸೆಕ್ಷನ್ 498 ಎ ಅಡಿ ವರದಕ್ಷಿಣೆ ಕಿರುಕುಳದ ಆರೋಪ ಹೊರಿಸಿ ಕಾನೂನು ಕ್ರಮಕ್ಕೆ ಮುಂದಾಗಲು ಅವಕಾಶ ಇಲ್ಲ ಎಂದು ಮಹತ್ವದ ತೀರ್ಪು ನೀಡಿದೆ.
ವರದಕ್ಷಿಣೆ ಕಿರುಕುಳದ ಆರೋಪದ ಅಡಿಯಲ್ಲಿ ವ್ಯಕ್ತಿಯೊಬ್ಬರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಬೇಕು ಎಂದಾದರೆ ಪತಿಯ ಜೊತೆ ಆ ವ್ಯಕ್ತಿಯು ರಕ್ತ ಸಂಬಂಧ ವೈವಾಹಿಕ ಸಂಬಂಧ ಅಥವಾ ದತ್ತು ಮೂಲಕ ಬರುವ ಸಂಬಂಧ ಹೊಂದಿರಬೇಕು ಎಂದು ತೀರ್ಪಿನಲ್ಲಿ ಸ್ಪಷ್ಟಪಡಿಸಿದೆ.
ಸಂಪಾದಕರು
ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ