23/12/2024

Law Guide Kannada

Online Guide

A criminal complaint can be filed only if a fake document is submitted to the court

ನ್ಯಾಯಾಲಯಕ್ಕೆ ನಕಲಿ ದಾಖಲೆ ಸಲ್ಲಿಸಿದ್ದರೇ ಕ್ರಿಮಿನಲ್ ದೂರು ದಾಖಲಿಸಲು ಅವಕಾಶ

ಬೆಂಗಳೂರು: ನಕಲಿ ದಾಖಲೆ ಸೃಷ್ಠಿಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನ ಕರ್ನಾಟಕ ಹೈಕೋರ್ಟ್ ವಜಾಗೊಳಿದೆ.

ಅಲ್ಲದೆ ನಕಲಿ ದಾಖಲೆಯನ್ನು ಸೃಷ್ಟಿಸಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿದ್ದರೆ, ಅಂತಹ ಸ0ದರ್ಭದಲ್ಲಿ ಖಾಸಗಿ ವ್ಯಕ್ತಿಗಳೂ ಪೊಲೀಸ್ ಠಾಣೆ ಅಥವಾ ನ್ಯಾಯಾಲಯದಲ್ಲಿ ಕ್ರಿಮಿನಲ್ ದೂರು ದಾಖಲಿಸಬಹುದು ಎ0ದು ಕರ್ನಾಟಕ ಹೈಕೋರ್ಟ್ನ ನ್ಯಾ. ಸೂರಜ್ ಗೋವಿ0ದ ರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಮಹತ್ವದ ತೀರ್ಪು ನೀಡಿದೆ. ತೀರ್ಥಹಳ್ಳಿ ತಾಲೂಕು ನಿವಾಸಿ ವಸ0ತಿ ಎ0ಬವರು ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ತೀರ್ಥಹಳ್ಳಿ ತಾಲೂಕಿನ ಗಬಡಿ ಗ್ರಾಮದ ನಿವೇಶನಕ್ಕೆ ಸ0ಬಂಧಿಸಿದ0ತೆ ವಸ0ತಿ ಅವರು 2015ರಲ್ಲಿ ಉಮೇಶ್ ಎ0ಬವರ ವಿರುದ್ಧ ಸ್ಥಳೀಯ ನ್ಯಾಯಾಲಯದಲ್ಲಿ ಸಿವಿಲ್ ವ್ಯಾಜ್ಯ ಹೂಡಿದ್ದರು. ಈ ಮಧ್ಯೆ ವಾಸ0ತಿ ಅವರು ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ಸೃಷ್ಠಿಸಿ ಸಲ್ಲಿಸಿದ್ದಾರೆ ಎ0ದು ಆರೋಪಿಸಿ ಉಮೇಶ್ ಪ್ರತ್ಯೇಕ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು.

ವಿಚಾರಣಾ ನ್ಯಾಯಾಲಯವು ಈ ಖಾಸಗಿ ದೂರಿನ ಸ0ಜ್ಜೇಯತೆಯನ್ನು ಪಡೆದುಕೊ0ಡು ಆರೋಪಿಗಳಿಗೆ ಸಮನ್ಸ್ ಜಾರಿಗೊಳಿಸಿತ್ತು. ಈ ಮಧ್ಯೆ ಈ ಖಾಸಗಿ ದೂರನ್ನು ವಜಾ ಮಾಡಬೇಕೆಂದು ವಸ0ತಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್ ವಿಚಾರಣೆ ಬಳಿಕ ಈ ಅರ್ಜಿಯನ್ನು ವಜಾಗೊಳಿಸಿದೆ.

ಸಂಪಾದಕರು
ಲಾಗೈಡ್ ಕನ್ನಡ‌ ಕಾನೂನು ಮಾಸಪತ್ರಿಕೆ

Copyright © All rights reserved. | Newsphere by AF themes.