ನ್ಯಾಯಾಧೀಶೆಗೆ ಲೈಂಗಿಕ ಕಿರುಕುಳ ಆರೋಪ: ವರದಿ ಕೇಳಿದ ಸುಪ್ರೀಂಕೋರ್ಟ್
ನವದೆಹಲಿ: ಉತ್ತರಪ್ರದೇಶದ ಬಾರಾಬಂಕಿಯಲ್ಲಿ ನ್ಯಾಯಾಧೀಶೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂಬ ಆರೋಪದ ಬಗ್ಗೆ ತನಿಖೆಯ ಯಥಾಸ್ಥಿತಿ ವರದಿಯನ್ನು ನೀಡುವಂತೆ ಅಲಹಾಬಾದ್ ಹೈಕೋರ್ಟ್ ಗೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಕೇಳಿದ್ದಾರೆ.
ಪುರುಷ ನ್ಯಾಯಾಧೀಶರೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದಾರೆ ಎನ್ನಲಾದ ಈ ಮಹಿಳಾ ನ್ಯಾಯಾಧೀಶೆಯು ನನಗೆ ಸಾಯಲು ಅನುಮತಿ ನೀಡಿ ಎಂದು ಬರೆದಿರುವ ಪತ್ರವು ಜಾಲತಾಣದಲ್ಲಿ ವೈರಲ್ ಆಗಿವೆ.
ಈ ಪ್ರಕರಣದ ಬಗ್ಗೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರೇ ಅಲಹಾಬಾದ್ ಹೈಕೋರ್ಟ್ ರಿಜಿಸ್ಟ್ರಾರ್ ಅವರಿಗೆ ಪತ್ರ ಬರೆದು ಆಂತರಿಕ ದೂರು ಸಮಿತಿ ನಡೆಸುತ್ತಿರುವ ತನಿಖೆಯ ಯಥಾಸ್ಥಿತಿ ವರದಿಯನ್ನು ನೀಡುವಂತೆ ಕೇಳಿದ್ದಾರೆ.
ಸಂಪಾದಕರು
ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ