23/12/2024

Law Guide Kannada

Online Guide

ಚೆಕ್ ಬೌನ್ಸ್ ಕೇಸ್: ಆರೋಪಿ ಖುಲಾಸೆಗೊಳಿಸಿದ ಕೋರ್ಟ್

ಮಂಗಳೂರು: ಚೆಕ್ ಬೌನ್ಸ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಖುಲಾಸೆಗೊಳಿಸಿ ಮಂಗಳೂರಿನ 9ನೇ ಪ್ರಥಮ ದರ್ಜೆ ನ್ಯಾಯಿಕ ಮ್ಯಾಜಿಸ್ಟ್ರೇಟ್ (ಜೆಎಂಎಫ್.ಸಿ) ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ಬೆಳ್ತಂಗಡಿ ಗ್ರಾಮದ ಶರತ್ ಜೈನ್ ಖುಲಾಸೆಗೊಂಡ ಅರೋಪಿ. ಮಂಗಳೂರಿನ 9ನೇ ಜೆಎಂಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರಾದ ಡಾ. ಶಿಲ್ಪಾ ಬ್ಯಾಡಗಿ ಅವರು ಆರೋಪಿಯನ್ನು ಚೆಕ್ ಅಮಾನ್ಯ ಪ್ರಕರಣದ ಆರೋಪದಿಂದ ಮುಕ್ತಗೊಳಿಸಿ ತೀರ್ಪು ನೀಡಿದ್ದಾರೆ.

ಪ್ರಕರಣದ ಹಿನ್ನೆಲೆ
ಮಂಗಳೂರಿನ ಪ್ರತಿಷ್ಠಿತ ಜಯಾಂಬಿಕ ಚಿಟ್ಸ್ ಪ್ರೈ.ಲಿ. ಕಂಪೆನಿಯು ಅರೋಪಿ ಶರತ್ ಜೈನ್ ವಿರುದ್ಧ 3 ಲಕ್ಷ ರೂಪಾಯಿಯ ಚೆಕ್ ಅಮಾನ್ಯ ಪ್ರಕರಣ ದಾಖಲಿಸಿತ್ತು. 2016ರಲ್ಲಿ ನಡೆದಿದ್ದ ಚಿಟ್ ವ್ಯವಹಾರಕ್ಕೆ ಸಂಬಂಧಿಸಿದಂತೆ ನೀಡಲಾಗಿದ್ದ ಚೆಕ್ ನ್ನು ಬಳಸಿ ಜಯಾಂಬಿಕಾ ಚಿಟ್ ಕಂಪೆನಿಯು ಆರೋಪಿಯ ವಿರುದ್ಧ ಈ ಕೇಸ್ ದಾಖಲಿಸಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಸಂಸ್ಥೆಯಾದ ಜಯಾಂಬಿಕಾ ಚಿಟ್ಸ್ ಕಂಪೆನಿಯು ಚೆಕ್, ಪ್ರಾಮಿಸರಿ ನೋಟ್ ಸಹಿತ 9 ದಾಖಲೆಯನ್ನು ಕೋರ್ಟ್ ಗೆ ಹಾಜರುಪಡಿಸಿತ್ತು. ಆದರೆ, ನ್ಯಾಯಾಲಯದ ಮುಂದೆ ಹಾಜರಾದ ಆರೋಪಿ ಶರತ್ ಜೈನ್, ತನಗೆ ಯಾವುದೇ ಹಣ ಸಂದಾಯವಾಗಿಲ್ಲ ಎಂದು ವಾದ ಮಾಡಿದ್ದರು. ದೂರುದಾರ ಸಂಸ್ಥೆ ಹಾಜರುಪಡಿಸಿದ ದಾಖಲೆ ಮತ್ತು ಮೌಖಿಕ ಸಾಕ್ಷಿಯನ್ನು ಪರಿಗಣಿಸಿದ ನ್ಯಾಯಾಲಯ ಫಿರ್ಯಾದಿ ಮತ್ತು ಆರೋಪಿ ಪರ ವಕೀಲರ ವಾದ ವಿವಾದವನ್ನು ಆಲಿಸಿದ ಬಳಿಕ ಆರೋಪಿ ಸದರಿ ಪ್ರಕರಣದಲ್ಲಿ ತಪ್ಪಿತಸ್ಥನಲ್ಲ ಎಂದು ತೀರ್ಮಾನಿಸಿ ಆರೋಪಿಯನ್ನ ಖುಲಾಸೆಗೊಳಿಸಿದೆ.
ಇನ್ನು ಆರೋಪಿ ಪರವಕೀಲರಾದ ಸುಕೇಶ್ ಕುಮಾರ್ ಶೆಟ್ಟಿ ಮತ್ತು ಕೆ. ಶ್ರೀಪತಿ ಪ್ರಭು ಅವರು ವಾದ ಮಂಡಿಸಿದ್ದರು.

ಸಂಪಾದಕರು
ಲಾಗೈಡ್ ಕನ್ನಡ‌ ಕಾನೂನು ಮಾಸಪತ್ರಿಕೆ

Copyright © All rights reserved. | Newsphere by AF themes.