ಕೃಷಿ ಭೂಮಿ ಕೃಷಿಯೇತರ ಚಟುವಟಿಕೆಗಳಿಗೆ ಪರಿವರ್ತನೆ
ಬೆಂಗಳೂರು: ಟೌನ್ ಮುನಿಸಿಪಲ್ ಕೌನ್ಸಿಲ್ (ಟಿಎಂಸಿ) ವ್ಯಾಪ್ತಿಗೆ ಒಳಪಡುವ ಕೃಷಿ ಭೂಮಿಯನ್ನು ಕೃಷಿಯೇತರ ಚಟುವಟಿಕೆಗಳಿಗೆ ಪರಿವರ್ತಿಸುವ ಅಗತ್ಯವಿಲ್ಲ ಎಂದು ರಾಜ್ಯ ಹೈಕೋರ್ಟ್ ತೀರ್ಪು ನೀಡಿದೆ.
ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಶ್ರೀಶೈಲ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನಂತರ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರು ಈ ಕುರಿತು ತೀರ್ಪು ನೀಡಿದ್ದಾರೆ.
ಟೌನ್ ಮುನಿಸಿಪಲ್ ಕೌನ್ಸಿಲ್ (ಟಿಎಂಸಿ) ವ್ಯಾಪ್ತಿಯಲ್ಲಿ ಭೂಮಿ ಇದೆ. ಹೀಗಾಗಿ, ಕರ್ನಾಟಕ ಭೂ ಕಂದಾಯ ಕಾಯ್ದೆಯ ನಿಬಂಧನೆಗಳನ್ನು ಅನ್ವಯಿಸಲು ಸಾಧ್ಯವಿಲ್ಲ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಜಮೀನುಗಳಿಗೆ ಕೆ.ಎಲ್.ಆರ್ ಕಾಯ್ದೆ ನಿಯಮಗಳು ಅನ್ವಯ ಆಗುವುದಿಲ್ಲ. ಮಹಾನಗರ ಪಾಲಿಕೆಯಂತೆಯೇ ಸ್ಥಾನವನ್ನು ಹೊಂದಿರುವ ಟಿಎಂಸಿಗೂ ಇದೇ ನೀತಿ ಅನ್ವಯ ಆಗುತ್ತದೆ . ಹೀಗಾಗಿ, ಟಿಎಂಸಿ ವ್ಯಾಪ್ತಿಯ ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ ಅಗತ್ಯವಿಲ್ಲ ಎಂದು ನ್ಯಾಯಾಲಯ ಸೂಚಿಸಿತು.
ಸಂಪಾದಕರು
ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ