ನಕಲಿ ಅಂಕಪಟ್ಟಿ: ಎರಡು ವರ್ಷ ಜೈಲು ಶಿಕ್ಷೆ
ಚಾಮರಾಜನಗರ: ದ್ವಿತೀಯ ಪಿಯುಸಿ ಪಾಸಾಗಿದೆ ಎಂದು ನಕಲಿ ಅಂಕಪಟ್ಟಿ ತಯಾರಿಸಿ ಗ್ರಾಮ ಲೆಕ್ಕಾಧಿಕಾರಿ ಹುದ್ದೆಯಲ್ಲಿದ್ದ ಎಂಟು ಮಂದಿಗೆ ಚಾಮರಾಜನಗರ ಮುಖ್ಯ ನ್ಯಾಯಿಕ ದಂಡಾಧಿಕಾರಿ ನ್ಯಾಯಾಲಯ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಚಾಮರಾಜನಗರ ಜಿಲ್ಲೆಯಲ್ಲಿ 46 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳು ತೆರವಾಗಿತ್ತು. ದ್ವಿತೀಯ ಪಿಯುಸಿ ಅಂಕಪಟ್ಟಿ ಪರಿಶೀಲಿಸಿ ಮೆರಿಟ್ ಮತ್ತು ರೋಸ್ಟರ್ ಆಧರಿಸಿ ನೇಮಕಾತಿ ನಡೆದಿತ್ತು. ಅಭ್ಯರ್ಥಿಗಳ ಅಂಕಪಟ್ಟಿಯ ನೈಜತೆ ಪರಿಶೀಲಿಸಿದಾಗ ಈ ಎಂಟು ಮಂದಿ ನಕಲಿ ಅಂಕಪಟ್ಟಿ ತಯಾರಿಸಿರುವುದು ಕಂಡು ಬಂದಿತು. ಈ ಎಂಟು ಮಂದಿಯನ್ನು ಸೇವೆಯಿಂದ ವಜಾಗೊಳಿಸಲಾಗಿತ್ತು. ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ನ್ಯಾಯಾಧೀಶರಾದ ಬಿ.ಎಸ್.ಹೊನ್ನಸ್ವಾಮಿ ಅವರು ವಿಚಾರಣೆ ನಡೆಸಿ ಆರೋಪಿಗಳಿಗೆ ಶಿಕ್ಷೆ ವಿಧಿಸಿದ್ದಾರೆ. ಸರಕಾರದ ಪರ ಸಹಾಯಕ ಸರಕಾರಿ ಅಭಿಯೋಜಕರಾದ ಎ.ಸಿ.ಮಹೇಶ್ ವಾದ ಮಂಡಿಸಿದ್ದರು.
ಸಂಪಾದಕರು
ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ