ಅಂತಿಮ ವರ್ಷದ ಕಾನೂನು ವಿದ್ಯಾರ್ಥಿಗಳಿಗೆ ಎಬಿಐಇ ಪರೀಕ್ಷೆಗೆ ನಕಾರ: BCI ಪ್ರತಿಕ್ರಿಯೆ ಕೇಳಿದ ಸುಪ್ರೀಂ
ನವದೆಹಲಿ: ಅಂತಿಮ ವರ್ಷದ ಕಾನೂನು ವಿದ್ಯಾರ್ಥಿಗಳಿಗೆ ಪರೀಕ್ಷೆ ನೀಡದ BCI ಅಧಿಸೂಚನೆಯನ್ನು ರದ್ದುಪಡಿಸಬೇಕು ಹಾಗೂ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನೀಡುವಂತೆ ಬಿಸಿಐಗೆ ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಪ್ರತಿಕ್ರಿಯೆ ನೀಡುವಂತೆ ಭಾರತೀಯ ವಕೀಲರ ಪರಿಷತ್ತಿ (BCI)ಗೆ ಸುಪ್ರೀಂಕೋರ್ಟ್ ಗೆ ಸೂಚಿಸಿದೆ.
ಕಾನೂನು ಪದವಿಯ ಕೊನೆಯ ಸೆಮಿಸ್ಟರ್ ನಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಎಐಬಿಇ ಪರೀಕ್ಷೆ ನೀಡದ ಬಿಸಿಐ ಕ್ರಮ ಪ್ರಶ್ನಿಸಿ, ದೆಹಲಿ ವಿಶ್ವವಿದ್ಯಾಲಯದಯಲ್ಲಿ ಎಲ್.ಎಲ್.ಬಿ 3ನೇ ವರ್ಷದ ಕೊನೆಯ ಸೆಮಿಸ್ಟರ್ 9 ವಿದ್ಯಾರ್ಥಿಗಳು ಸುಪ್ರೀಂ ಕೋರ್ಟ್ ಗೆ ಮೊರೆ ಹೋಗಿದ್ದರು.
ಈ ಅರ್ಜಿ ವಿಚಾರಣೆ ನಡೆಸಿದ ಸಿಜೆಐ ಡಿವೈ ಚಂದ್ರಚೂಡ್ ಹಾಗೂ ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಹಾಗೂ ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರಿದ್ದ ಪೀಠ ವಿದ್ಯಾರ್ಥಿಗಳ ಮನವಿ ಕುರಿತಂತೆ ಪ್ರತಿಕ್ರಿಯೆ ನೀಡಲು ಬಿಸಿಐಗೆ ಆದೇಶಿಸಿದೆ. ವಿಚಾರಣೆ ವೇಳೆ ಹಾಜರಿದ್ದ ಬಿಸಿಐ ಪರ ವಕೀಲರಿಗೆ ಮುಂದಿನ ವಾರದೊಳಗೆ ವಿವರಣೆ ನೀಡುವಂತೆ ಸೂಚನೆ ನೀಡಿದೆ
ಅರ್ಜಿದಾರ ವಿದ್ಯಾರ್ಥಿಗಳ ಮನವಿ ಏನು?
ಬಾರ್ ಕೌನ್ಸಿಲ್ ಆಫ್ ಇಂಡಿಯಾ ವರ್ಸಸ್ ಬೋನಿ ಎಫ್ಒಐ ಲಾ ಕಾಲೇಜು ಪ್ರಕರಣದಲ್ಲಿ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳಿಗೂ ಎಐಬಿಇ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಸುಪ್ರೀಂ ಕೋರ್ಟ್ ಈ ಹಿಂದೆ ಹೇಳಿದೆ. ಅಲ್ಲದೇ, ವರ್ಷಕ್ಕೆ ಎರಡು ಬಾರಿ ಎಐಬಿಇ ಪರೀಕ್ಷೆ ನಡೆಸಲು ನಿರ್ದೇಶಿಸಿದೆ. ಆದರೆ, ಭಾರತೀಯ ವಕೀಲರ ಪರಿಷತ್ತು ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಎಐಬಿಇ ಬರೆಯಲು ಅವಕಾಶ ನಿರಾಕರಿಸಿದೆ.
ಬಿಸಿಐನ ಈ ಕ್ರಮದಿಂದಾಗಿ ವಿದ್ಯಾರ್ಥಿಗಳು ವೃತ್ತಿ ಬದುಕಿಗೆ ಕಾಲಿಡುವ ತಮ್ಮ ಅಮೂಲ್ಯ ಸಮಯ ಕಳೆದುಕೊಂಡಿದ್ದಾರೆ. ಹೀಗಾಗಿ ಅಂತಿಮ ವರ್ಷದ ಕಾನೂನು ವಿದ್ಯಾರ್ಥಿಗಳಿಗೆ ಪರೀಕ್ಷೆ ನೀಡದ ಬಿಸಿಐ ಅಧಿಸೂಚನೆಯನ್ನು ರದ್ದುಪಡಿಸಬೇಕು ಹಾಗೂ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನೀಡುವಂತೆ ಬಿಸಿಐಗೆ ನಿರ್ದೇಶಿಸಬೇಕು ಎಂದು ಅರ್ಜಿದಾರ ವಿದ್ಯಾರ್ಥಿಗಳು ಅರ್ಜಿಯಲ್ಲಿ ಮನವಿ ಮಾಡಿದ್ದರು.
ಸಂಪಾದಕರು
ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ