05/01/2025

Law Guide Kannada

Online Guide

ಮುಸ್ಲಿಂ ದಂಪತಿಗೆ ವಿವಾಹ ಪ್ರಮಾಣಪತ್ರ: ವಕ್ಫ್ ಗೆ ಅಧಿಕಾರ ನೀಡಿದ್ದ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ

ಬೆಂಗಳೂರು: ಮುಸ್ಲಿಂ ದಂಪತಿಗೆ ವಿವಾಹ ಪ್ರಮಾಣಪತ್ರ ನೀಡಲು ವಕ್ಸ್ ಮಂಡಳಿಗೆ ಅಧಿಕಾರ ನೀಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ.

ವಕ್ಫ್ ಮಂಡಳಿಗಳಿಗೆ ಮುಸ್ಲಿಂ ವಿವಾಹಗಳನ್ನು ಕಡ್ಡಾಯವಾಗಿ ನೋಂದಾಯಿಸುವ ಯಾವುದೇ ಶಾಸನಾತ್ಮಕ ಅಧಿಕಾರ ಇಲ್ಲ ಎಂದು ಆಕ್ಷೇಪಿಸಿ ಎ. ಆಲಂ ಪಾಷಾ ಅವರು ಹೈಕೋರ್ಟ್ ಮುಂದೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ, ಸರ್ಕಾರದ ಆದೇಶಕ್ಕೆ ತಡೆ ನೀಡಿದೆ.

ಅರ್ಜಿದಾರರ ಆಕ್ಷೇಪವನ್ನು ಪುಷ್ಟಿಕರಿಸುವ ಪ್ರಬಲ ಕಾರಣ ಮೇಲ್ನೋಟಕ್ಕೆ ಕಂಡುಬರುತ್ತಿದೆ. ಹಾಗಾಗಿ, ರಾಜ್ಯ ಸರ್ಕಾರ ವಕ್ಫ್ ಮಂಡಳಿ ಮತ್ತು ಅದರ ಅಧಿಕಾರಿಗಳಿಗೆ ಮುಸ್ಲಿಂ ದಂಪತಿಗಳ ವಿವಾಹ ಪ್ರಮಾಣಪತ್ರ ವಿತರಿಸಲು ನೀಡಿರುವ ಅನುಮತಿಯನ್ನು 7-01-2025ರ ವರೆಗೆ ಅಮಾನತ್ತಿನಲ್ಲಿ ಇಡಲಾಗಿದೆ ಎಂದು ಹೈಕೋರ್ಟ್ ನ್ಯಾಯಪೀಠ ಆದೇಶಿಸಿತು.

ಸಂಪಾದಕರು
ಲಾಗೈಡ್ ಕನ್ನಡ‌ ಕಾನೂನು ಮಾಸಪತ್ರಿಕೆ

Copyright © All rights reserved. | Newsphere by AF themes.