ಪುತ್ರಿ ಮೃತಪಟ್ಟಿದ್ದರೂ ವಾರಸುದಾರರಿಗೆ ಆಸ್ತಿ ಹಕ್ಕು- ಹೈಕೋರ್ಟ್
ಬೆಂಗಳೂರು : ಮಗಳು ಮೃತಪಟ್ಟಿದ್ದಾಳೆ ಎಂಬ ಕಾರಣಕ್ಕೆ ಆಕೆಯ ವಾರಸುದಾರರಿಗೆ ಆಸ್ತಿಯಲ್ಲಿ ಹಕ್ಕಿಲ್ಲ ಎಂದು ಹೇಳುವಂತಿಲ್ಲ. ಮೃತ ಮಗನ ವಾರಸುದಾರರು ಆಸ್ತಿಯಲ್ಲಿ ಪಾಲು ಪಡೆಯಬಹುದು. ಆದರೆ, ಮಗಳ ವಾರಸುದಾರಿಗೆ ಆಸ್ತಿಯಲ್ಲಿ ಹಕ್ಕಿಲ್ಲ ಎಂದರೆ ಹೇಗೆ?ಇದು ಗಂಡು-ಹೆಣ್ಣಿನ ನಡುವೆ ತಾರತಮ್ಯ ಮಾಡಿದಂತೆ ಎಂದು ರಾಜ್ಯ ಹೈಕೋರ್ಟ್ ಹೇಳಿದೆ.
ಹಿಂದೂ ಉತ್ತರಾಧಿಕಾರ ಕಾಯ್ದೆಗೆ 2005ರಲ್ಲಿ ತಿದ್ದುಪಡಿಯಾಗುವ ಮುನ್ನವೇ ಮಗಳು ಮೃತಪಟ್ಟಿದ್ದಾಳೆ ಎಂದು ಆಕೆಯ ಉತ್ತರಾಧಿಕಾರಿಗಳಿಗೆ ಆಸ್ತಿ ಹಕ್ಕು ಇಲ್ಲ ಎನ್ನಲು ಸಾಧ್ಯವಿಲ್ಲ. ಆಸ್ತಿಯಲ್ಲಿ ಸಮಾನ ಪಾಲು ಪಡೆಯಲು ಕಾನೂನು ಬದ್ಧ ವಾರಸುದಾರರು ಅರ್ಹರು ಎಂದು ಹೈಕೋರ್ಟ್ ಹೇಳಿದೆ.
ಗದಗ ಜಿಲ್ಲೆ ನರಗುಂದ ತಾಲೂಕಿನ ಚನ್ನಬಸಪ್ಪ ಎಂಬುವರು ಈ ಕುರಿತು ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಸಚಿನ್ ಶಂಕರ್ ಮುಗ್ದಂ ಅವರಿದ್ದ ನ್ಯಾಯಪೀಠ ಅರ್ಜಿಯನ್ನು ವಜಾಗೊಳಿಸಿದೆ.
ನಾಗವ್ವ ಮತ್ತು ಸಂಗವ್ವ ಎಂಬುವರು ಈ ಹಿಂದೆ ಮೃತಪಟ್ಟಿದ್ದಾರೆ. ಅವರ ವಾರಸುದಾರರುದೆ ಆಸ್ತಿಯಲ್ಲಿ ಸಮಾನ ಹಕ್ಕು ಕೇಳಲು ಸಾಧ್ಯವಿಲ್ಲ. ಕಾಯ್ದೆಗೆ ತಿದ್ದುಪಡಿ ಮುನ್ನವೇ ಇವರು ತೀರಿಕೊಂಡಿರುವುದರಿಂದ ಇವರ ವಾರಸುದಾರರಿಗೆ ಆಸ್ತಿಯಲ್ಲಿ ಸಮಾನ ಹಕ್ಕು ಕೇಳಲು ಆಗುವುದಿಲ್ಲ ಎಂಬುದು ಅರ್ಜಿದಾರರ ವಾದವಾಗಿತ್ತು.
ಸಂಪಾದಕರು
ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ