ಅಪ್ತಾಪ್ತೆ ಮೇಲೆ ಅತ್ಯಾಚಾರ ಕೊಲೆ ಕೇಸ್: 60 ದಿನಗಳಲ್ಲಿ ಗಲ್ಲುಶಿಕ್ಷೆ ವಿಧಿಸಿ ತ್ವರಿತ ತೀರ್ಪು ಕೊಟ್ಟ ಕೋರ್ಟ್
ಕೊಲ್ಕತ್ತಾ: ಅತ್ಯಾಚಾರದಂತಹ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ವಿಚಾರಣೆ ನಡೆಸಿ ತೀರ್ಪು ನೀಡುವುದು ಅಷ್ಟು ಸುಲಭವಲ್ಲ. ಕೆಲ ಪ್ರಕರಣಗಳನ್ನ ಸುದೀರ್ಘವರೆಗೆ ವಿಚಾರಣೆ ನಡೆಸಿ ತೀರ್ಪುಕೊಟ್ಟಿರುವ ಹಲವು ಉದಾಹರಣೆಗಳಿವೆ. ಅದರಲ್ಲಿ ದೆಹಲಿಯಲ್ಲಿ ನಡೆದ ನಿರ್ಭಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣವೂ ಒಂದು. ಈ ರೀತಿಯ ವಿಳಂಬ ಧೋರಣೆಗೆ ಜನರು ಅಸಮಾಧಾನ ವ್ಯಕ್ತಪಡಿಸಿದ್ದುಂಟು. ಈ ಮಧ್ಯೆ ಪಶ್ಚಿಮ ಬಂಗಾಳದಲ್ಲಿ ಮುರ್ಷಿದಾಬಾದ್ ನ್ಯಾಯಾಲಯವು ಅಪ್ತಾಪ್ತೆ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಆರೋಪಿಗಳಿಗೆ 60 ದಿನಗಳಲ್ಲಿ ಶಿಕ್ಷೆ ವಿಧಿಸಿ ತ್ವರಿತ ತೀರ್ಪು ನೀಡಿದೆ ಹೌದು ಅಕ್ಟೋಬರ್ ನಲ್ಲಿ ನಡೆದ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಪಶ್ಚಿಮ ಬಂಗಾಳ ನ್ಯಾಯಾಲಯವು ಒಬ್ಬ ವ್ಯಕ್ತಿಗೆ ಮರಣದಂಡನೆ ಮತ್ತು ಇನ್ನೊಬ್ಬನಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಮಾಡಿ ಕೊಂದಿದ್ದಕ್ಕಾಗಿ ಆರೋಪಿ ದೀನಬಂಧು ಹಲ್ದರ್ ಗೆ ಮರಣದಂಡನೆ ಅತ್ಯಾಚಾರಕ್ಕಾಗಿ ಸುಭೋ ಹಲ್ದರ್ ಗೆ ಜೀವಾವಧಿ ಶಿಕ್ಷೆ ಮತ್ತು ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿ ನ್ಯಾಯಾಧೀಶ ಅಮಿತಾವ ಮುಖರ್ಜಿ ತೀರ್ಪು ಪ್ರಕಟಿಸಿದರು.
ಫರಕ್ಕಾದಲ್ಲಿ 9 ವರ್ಷದ ಅಪ್ರಾಪ್ತ ಬಾಲಕಿಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಇಬ್ಬರೂ ಆರೋಪಿಗಳು ತಪ್ಪಿತಸ್ಥರು ಎಂದು ನ್ಯಾಯಾಲಯ ತೀರ್ಪು ನೀಡಿದೆ. ಪೋಕ್ಸೊ ಕಾಯ್ದೆಯಡಿ ಅತ್ಯಾಚಾರಕ್ಕಾಗಿ ಮತ್ತು ಅಪಹರಣ ಮತ್ತು ಕೊಲೆಗಾಗಿ ಭಾರತೀಯ ನ್ಯಾಯ ಸಂಹಿತಾ (ಬಿಎನ್ಎಸ್) ನ ವಿವಿಧ ವಿಭಾಗಗಳ ಅಡಿಯಲ್ಲಿ ಬಂಧಿತ ಇಬ್ಬರು ಆರೋಪಿಗಳನ್ನು ನ್ಯಾಯಾಲಯ ದೋಷಿ ಎಂದು ಘೋಷಿಸಿ 61 ದಿನಗಳಲ್ಲಿ ಈ ತೀರ್ಪು ಹೊರಡಿಸಿದೆ.
ದಕ್ಷಿಣ 24 ಪರಗಣಗಳಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಏಕೈಕ ಆರೋಪಿ ಮುಸ್ತಾಕಿನ್ ಸರ್ದಾರ್ಗೆ ಬರೂಯಿಪುರದ ಮತ್ತೊಂದು ನ್ಯಾಯಾಲಯ ಮರಣದಂಡನೆ ವಿಧಿಸಿದ್ದರಿಂದ ಎಂಟು ದಿನಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ಮರಣದಂಡನೆ ವಿಧಿಸಿದ ಎರಡನೇ ಪ್ರಕರಣ ಇದಾಗಿದೆ.
ಸಂಪಾದಕರು
ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ