22 ವರ್ಷ ಸಹ ಜೀವನ ನಡೆಸಿ ಈಗ ಪ್ರಿಯಕರನ ವಿರುದ್ದ ರೇಪ್ ಕೇಸ್: ಹೈಕೋರ್ಟ್ ಕೊಟ್ಟ ತೀರ್ಪೇನು?
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಪರಸ್ಪರ ಪ್ರೀತಿ ಬಾಂಧವ್ಯ, ನಂಬಿಕೆ ಎಂಬುದು ಕಡಿಮೆಯಾಗುತ್ತಿದೆ. ಮದುವೆಯಾದರೂ ಮೂರೇ ತಿಂಗಳಿಗೆ ಮುರಿದು ಬೀಳುವ ಸಂಬಂಧಗಳು ಹೆಚ್ಚಾಗುತ್ತಿವೆ. ಅಂತೆಯೇ ಇಲ್ಲೊಬ್ಬ ಮಹಿಳೆ 22 ವರ್ಷಗಳ ಕಾಲ ಪ್ರಿಯಕರನ ಜೊತೆ ಸಹ ಜೀವನ ನಡೆಸಿ ಆತನ ವಿರುದ್ದವೇ ರೇಪ್ ಕೇಸ್ ದಾಖಲಿಸಿದ್ದು, ಇದೀಗ ಈ ಪ್ರಕರಣವನ್ನ ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.
ಕರ್ನಾಟಕ ಹೈಕೋರ್ಟ್ ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ಹೊರಡಿಸಿದೆ. ಸುಮಾರು 22 ವರ್ಷಗಳ ಕಾಲ ಲಿವ್ ಇನ್ ರಿಲೇಶನ್ (ಸಹಜೀವನ) ನಡೆಸಿ ಬಳಿಕ ಪ್ರಿಯತಮನ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರ ಪ್ರಕರಣವನ್ನು ಮಾಜಿ ಗೆಳತಿ ದಾಖಲಿಸಿದ್ದರು. ಇದೀಗ ಈ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ.
ಅತ್ಯಾಚಾರ, ಜೀವ ಬೆದರಿಕೆ ಮತ್ತು ವಂಚನೆ ಸೇರಿದಂತೆ ಇನ್ನಿತರ ಆರೋಪಗಳನ್ನು ಹೊರಿಸಿ ಮಾಜಿ ಗೆಳತಿ ತನ್ನ ಪ್ರಿಯಕರನ ವಿರುದ್ಧ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರನ್ನು ರದ್ದು ಪಡಿಸಬೇಕೆಂದು ಕೋರಿ ನೆಲಮಂಗಲದ ಸತೀಶ್ ಎಂಬವರು ಹೈಕೋರ್ಟ್ಗೆ ಅರ್ಜಿ ಸಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿ ಪ್ರಕರಣವನ್ನ ಹೈಕೋರ್ಟ್ ರದ್ದುಗೊಳಿಸಿದೆ.
ಸಂಪಾದಕರು
ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ