23/12/2024

Law Guide Kannada

Online Guide

ಕಲಾಪದ ವೇಳೆ ಕೂಗಾಡಿ ಅಶಿಸ್ತು ಪ್ರದರ್ಶನ: ಜಿಲ್ಲಾ ನ್ಯಾಯಾಧೀಶರ ವಿರುದ್ದ ಕ್ರಮ ಕೈಗೊಂಡ ಹೈಕೋರ್ಟ್

ನವದೆಹಲಿ: ಕಲಾಪದ ವೇಳೆ ಕೂಗಾಡಿ ಅಶಿಸ್ತು ಪ್ರದರ್ಶನ ಮಾಡಿದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ನೈರುತ್ಯ ದ್ವಾರಕಾದಲ್ಲಿ ಜಿಲ್ಲಾ ನ್ಯಾಯಾಧೀಶರಾಗಿದ್ದ ಅಮನ್ ಪ್ರತಾಪ್ ಸಿಂಗ್ ಅವರನ್ನು ದೆಹಲಿ ಹೈಕೋರ್ಟ್ ನ್ಯಾಯಾಂಗ ಕರ್ತವ್ಯದಿಂದ ಹಿಂದಕ್ಕೆ ಕರೆಸಿಕೊಂಡಿದೆ.

ನ್ಯಾಯಾಧೀಶರ ಅಶಿಸ್ತು, ಪ್ರಕರಣಗಳ ವಿಲೇವಾರಿಯಲ್ಲಿ ಇಳಿಕೆ ಮತ್ತು ನ್ಯಾಯಾಲಯದ ವೇಳಾಪಟ್ಟಿಯನ್ನು ಅನುಸರಿಸಲು ವಿಫಲರಾದ ಕಾರಣ ಕಳೆದ ವಾರ ನಡೆದ ನ್ಯಾಯಾಲಯಕ್ಕೆ ಸಂಬಂಧಿಸಿದ ಸಭೆಯಲ್ಲಿ ಅಮನ್ ಪ್ರತಾಪ್ ಸಿಂಗ್ ಅವರನ್ನು ನ್ಯಾಯಾಂಗ ಕರ್ತವ್ಯದಿಂದ ವಾಪಸ್ ಕರೆಸಿಕೊಳ್ಳುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ.

ನ್ಯಾಯಾಲಯದ ಕೊಠಡಿಯಲ್ಲಿ ನ್ಯಾಯಾಧೀಶರು ಅನುಚಿತವಾಗಿ ವರ್ತಿಸಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು.

ಈ ಬೆನ್ನಲ್ಲೆ ಸಿಂಗ್ ಅವರನ್ನು ನ್ಯಾಯಾಂಗ ಕರ್ತವ್ಯದಿಂದ ಹಿಂದಕ್ಕೆ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಮೂಲಗಳು ತಿಳಿಸಿದೆ.

ಜಿಲ್ಲಾ ನ್ಯಾಯಾಧೀಶರು ನ್ಯಾಯಾಲಯದ ಕಲಾಪದ ವೇಳೆ ತಮ್ಮ ಕುರ್ಚಿಯಿಂದ ಎದ್ದುನಿಂತು ನ್ಯಾಯಾಲಯದ ಸಿಬ್ಬಂದಿ ಮತ್ತು ಆರೋಪಿ ಪರ ವಕೀಲರನ್ನು ಉದ್ದೇಶಿಸಿ ಕೂಗಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಸೆ.19ರಂದು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಹೊರಡಿಸಿದ ಅಧಿಕೃತ ಆದೇಶದಲ್ಲಿ ತಕ್ಷಣಕ್ಕೆ ಜಾರಿಗೆ ಬರುವಂತೆ ಸಿಂಗ್ ಅವರನ್ನು ನ್ಯಾಯಾಂಗ ಕರ್ತವ್ಯದಿಂದ ಹಿಂದಕ್ಕೆ ಕರೆಸಿಕೊಳ್ಳುವುದಾಗಿ ಹೇಳಲಾಗಿದೆ.

ಸಂಪಾದಕರು
ಲಾಗೈಡ್ ಕನ್ನಡ‌ ಕಾನೂನು ಮಾಸಪತ್ರಿಕೆ

Copyright © All rights reserved. | Newsphere by AF themes.